ತುಮಕೂರು:ತೈಲ ಬೆಲೆ ಏರಿಕೆಯಾದಂತೆ ಸಹಜವಾಗಿ ದಿನ ಬಳಕೆ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತಿದೆ. ಆದರೆ, ಜನರ ಆದಾಯದಲ್ಲಿ ಹೆಚ್ಚಳವಾಗದೆ ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.
ಪ್ರತಿ ಲೀಟರ್ಗೆ 63 ರೂ. ಇದ್ದ ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆಯಾಗಿ 100 ರೂ. ತಲುಪಿದೆ. ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ವತಿಯಿಂದ ರಾಜ್ಯದ 900 ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆ ನಡೆಯುತ್ತಿದೆ. ನಾಳೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.