ತುಮಕೂರು:ವಿದ್ಯಾವಂತ ಸಮುದಾಯ ಆಮಿಷಗಳಿಗೆ ಬಲಿಯಾಗಿ ಮತ ಚಲಾಯಿಸುತ್ತಿದ್ದಾರೆ ಎಂಬ ಆರೋಪ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳ ಮತದಾರರ ಮೇಲಿದೆ. ಇದರಿಂದ ಹೊರಬರಲು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಮತ ಚಲಾಯಿಸುವಂತೆ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಮತದಾರರಲ್ಲಿ ಮನವಿ ಮಾಡಿದರು.
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿಕ್ಷಕರು ಮತ್ತು ಪದವೀಧರರಿಗೆ ಏನಾದರೂ ಸರ್ಕಾರದ ಸವಲತ್ತುಗಳು ದೊರೆತಿವೆ ಎಂದರೆ, ಅದು ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಮಾತ್ರ. ಆದರೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿಲ್ಲ. ಇದಕ್ಕೆ ಕಾರಣ ಈ ಕ್ಷೇತ್ರಗಳ ಮತದಾರರು ಬಿಜೆಪಿ ಹಾಗೂ ಜೆಡಿಎಸ್ ನ ಹಣದ ಆಮಿಷಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ ಎಂಬ ಆಪಾದನೆಗಳು ಕೇಳಿಬರುತ್ತಿವೆ. ಇದರಿಂದ ಮತದಾರರು ಹೊರಬರಲು ಇರುವ ಏಕೈಕ ಮಾರ್ಗವೆಂದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ ಬಾಬು ಅವರನ್ನು ಗೆಲ್ಲಿಸುವುದು ಎಂದರು.