ತುಮಕೂರು:ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ವಾಹನದಲ್ಲಿದ್ದ ಓರ್ವ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಹುಚ್ಚಗೊಂಡನಹಳ್ಳಿ ಬಳಿ ನಡೆದಿದೆ.
ಬೊಲೆರೋಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ತಿಪಟೂರು ತಾಲೂಕಿನ ಹುಚ್ಚಗೊಂಡನಹಳ್ಳಿ ಬಳಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ವಾಹನದಲ್ಲಿದ್ದ ಓರ್ವ ಮೃತಪಟ್ಟಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಳಿಯಾರಿನ ಎಂ.ರಾಘವೇಂದ್ರ(23) ಮೃತ ಯುವಕ. ತಿಪಟೂರು ತಾಲೂಕಿನ ಕಲ್ವರಿ ಪ್ರಾರ್ಥನಾ ಮಂದಿರದ ಎದುರು ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೊಲೇರೋ ಸಂಪೂರ್ಣ ನಜುಗುಜ್ಜಾಗಿದೆ. ಕಡೂರು ತಾಲೂಕಿನ ಯಗಟಿಯಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬೊಲೆರೋ ವಾಹನದಲ್ಲಿ ಯುವಕರು ತೆರಳಿದ್ದರು. ಮದುವೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ತಿಪಟೂರು ತಾಲೂಕಿನ ಹುಚ್ಚಗೊಂಡನಹಳ್ಳಿ ಬಳಿ ಕೆಎಸ್ಆರ್‌ಟಿಸಿ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಿಪಟೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.