ತುಮಕೂರು:ನಾಳೆಯಿಂದ ತುಮಕೂರು- ಬೆಂಗಳೂರು ಹಾಗೂ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ತುಮಕೂರು ಡಿಪೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಸ್ ಮತ್ತು ನಿಲ್ದಾಣಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಬಸ್ ಪ್ರಯಾಣಕ್ಕೆ ಕೋವಿಡ್ ನೆಗೆಟಿವ್ ವರದಿ ತೋರಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಈಟಿವಿ ಭಾರತ್ಗೆ ಮಾಹಿತಿ ನೀಡಿರುವ ತುಮಕೂರು ವಿಭಾಗಿಯ ಸಂಚಾರ ಅಧಿಕಾರಿ ಫಕ್ರುದ್ದೀನ್, ತುಮಕೂರು ಜಿಲ್ಲೆಯಲ್ಲಿ ನಾಳೆಯಿಂದ 150 ಬಸ್ಗಳು ಸಂಚಾರ ಮಾಡಲಿವೆ. ಅವಶ್ಯಕತೆ ಅನುಗುಣವಾಗಿ ಹೆಚ್ಚಿನ ಬಸ್ ಓಡಿಸಲು ನಿರ್ಧರಿಸಲಾಗಿದೆ. ತುಮಕೂರಿನಿಂದ ಬೆಂಗಳೂರಿಗೆ 40 ಬಸ್ಗಳು ಸಂಚರಿಸಲಿವೆ ಎಂದಿದ್ದಾರೆ.