ತುಮಕೂರು: ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ಗೂ ಕೊರೊನಾ ಸೋಂಕು ತಗುಲಿದೆ.
ಕುಣಿಗಲ್ ಶಾಸಕ ಡಾ. ರಂಗನಾಥ್ಗೆ ಕೊರೊನಾ! - Dr. Ranganath news
ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ರಂಗನಾಥ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ ಇವರು ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಡಾ. ರಂಗನಾಥ್
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ರಂಗನಾಥ್, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ದಾಖಲಾಗಿರುವುದಾಗಿ ತಿಳಿಸಿದ್ದಾರೆ.
ಕುಣಿಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಮಂದಿ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದರಿಂದ ಸೋಂಕಿಗೆ ಒಳಗಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.