ತುಮಕೂರು: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಧುಗಿರಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ.
ಲಕ್ಷ್ಮೀಪುರದಲ್ಲಿ ತುಮಕೂರು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ - ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್
ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಹಿನ್ನೆಲೆ ಇಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಮಧುಗಿರಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ.
ತುಮಕೂರು ಜಿಲ್ಲಾಧಿಕಾರಿಯಿಂದ ಲಕ್ಷ್ಮೀಪುರ ಗ್ರಾಮ ವಾಸ್ತವ್ಯ
ಕೃಷಿ, ತೋಟಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ಅಧಿಕಾರಿಗಳು ಅರಿವು ಮೂಡಿಸಿದರು. ಇದೇ ವೇಳೆ ಆರು ಮಂದಿಗೆ ಪಿಂಚಣಿ ಆದೇಶ ಪತ್ರ ವಿತರಿಸಲಾಯಿತು. ಆರೋಗ್ಯ ಕಾರ್ಡ್, ಕೃಷಿ ಸಲಕರಣೆ ನೀಡಲಾಯಿತು.
ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಗ್ರಾಮ ವಾಸ್ತವ್ಯ ಮಾಡಲು ಬಂದಿದ್ದ ಅಧಿಕಾರಿಗಳನ್ನು ಮಧುಗಿರಿ ಶಾಸಕ ವೀರಭದ್ರಯ್ಯ ಸ್ವಾಗತಿಸಿದರು.