ತುಮಕೂರು :ಕೊರೊನಾ ಹಿನ್ನೆಲೆ ಈ ಬಾರಿ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿದೆ. ಇದರಿಂದ ನಗರದಲ್ಲಿರುವ ವಿಶ್ವವಿದ್ಯಾಲಯದ ಬಹುಪಾಲು ಎಲ್ಲಾ ಪದವಿ ಕಾಲೇಜುಗಳಲ್ಲಿನ ವಿವಿಧ ಕೋರ್ಸುಗಳಿಗೆ ಬೇಡಿಕೆ ಹೆಚ್ಚಿದೆ.
2019-2020ರ ಸಾಲಿನಲ್ಲಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿಯಲ್ಲಿ 14,404 ವಿದ್ಯಾರ್ಥಿಗಳು ಪಾಸಾಗಿದ್ದರು. ಇನ್ನು, 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ದಾಖಲಾಗಿದ್ದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದ 14,404 ಮಂದಿಯಲ್ಲಿ 11,627 ವಿದ್ಯಾರ್ಥಿಗಳು ಪದವಿಗೆ ದಾಖಲಾಗಿದ್ದರು.
ಪದವಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ದಾಖಲು :ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚುವರಿಯಾಗಿ 12,961 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಪಾಸಾದ ವಿದ್ಯಾರ್ಥಿಗಳಲ್ಲಿ ಕೆಲವರು ವಿದ್ಯಾಭ್ಯಾಸವನ್ನು ಸ್ಥಗಿತಗೊಳಿಸಿದ್ದು, ಕನಿಷ್ಠ 23 ಸಾವಿರ ವಿದ್ಯಾರ್ಥಿಗಳು ಪದವಿ ಕಾಲೇಜುಗಳತ್ತ ಮುಖ ಮಾಡಲಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗಿದೆ.