ತುಮಕೂರು:ಬಿಜೆಪಿ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಮಾಡುವ ಹೇಳಿಕೆ ಶ್ರೇಯಸ್ಕರವಲ್ಲ. ಮುಂದಿನ ಮೂರು ವರ್ಷಗಳ ಕಾಲ ಅಧಿಕಾರ ನಡೆಸಲು ಯಡಿಯೂರಪ್ಪನವರಿಗೆ ಅವಕಾಶ ಕೊಡಬೇಕು. ಷಡ್ಯಂತ್ರ ಮಾಡಿ ಅವರನ್ನು ಬದಲಾಯಿಸಿದರೆ ರಾಜ್ಯದಲ್ಲಿ ಬಿಜೆಪಿ ಹೇಳ ಹೆಸರು ಇರುವುದಿಲ್ಲ ಎಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಮ್ಮಡಿಹಳ್ಳಿಯ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಬಿಎಸ್ವೈ ಬದಲಿಸಿದರೆ ಬಿಜೆಪಿಗೆ ಉಳಿಗಾಲವಿಲ್ಲ: ಮಲ್ಲಿಕಾರ್ಜುನ ಮಹಾಸ್ವಾಮೀಜಿ ಎಚ್ಚರಿಕೆ - Leadership change in BJP
ಮುಂದಿನ ಮೂರು ವರ್ಷಗಳ ಕಾಲ ಅಧಿಕಾರ ನಡೆಸಲು ಯಡಿಯೂರಪ್ಪನವರಿಗೆ ಅವಕಾಶ ಕೊಡಬೇಕು. ಷಡ್ಯಂತ್ರ ಮಾಡಿ ಅವರನ್ನು ಬದಲಾಯಿಸಿದರೆ ರಾಜ್ಯದಲ್ಲಿ ಬಿಜೆಪಿ ಹೇಳ ಹೆಸರು ಇರುವುದಿಲ್ಲ ಎಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಮ್ಮಡಿಹಳ್ಳಿಯ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಹೇಳಿಕೆ ಶ್ರೇಯಸ್ಕರವಲ್ಲ: ಮಲ್ಲಿಕಾರ್ಜುನ ಮಹಾಸ್ವಾಮೀಜಿ
ತಿಪಟೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಇಳಿವಯಸ್ಸಿನಲ್ಲಿಯೂ ಕೊರೊನಾ ಬಿಕ್ಕಟ್ಟು ನಿವಾರಿಸುತ್ತ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬಂದ ನಂತರ ಉತ್ತಮವಾಗಿ ಮಳೆಯಾಗುತ್ತಿದೆ. ಆದರೆ, ದುರಂತ ಕೊರೊನಾ ಬಿಕ್ಕಟ್ಟು ಎದುರಿಸಬೇಕಾಗಿದೆ. ಅಲ್ಲದೇ ಅದು ನಿಯಂತ್ರಣಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.
ಮುಂದಿನ ಮೂರು ವರ್ಷಗಳು ಕೂಡ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಆಶಿಸಿದರು. ಪತ್ರಿಕಾಗೋಷ್ಠಿಯಲ್ಲಿ 8 ವಿವಿಧ ಮಠಗಳ ಮಠಾಧೀಶರು ಭಾಗವಹಿಸಿದ್ದರು.
Last Updated : Aug 2, 2020, 5:36 PM IST