ಕರ್ನಾಟಕ

karnataka

ETV Bharat / state

ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕಾನೂನು ತೊಡಕು: ಶಾಸಕ ನಾಗೇಶ್​​ಗೆ ಒಲಿಯದ ಹುದ್ದೆ - ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನ

ಜಿಲ್ಲೆಯಲ್ಲಿ ಈಗಾಗಲೇ ಮೂವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಒಲಿದು ಬಂದಿತ್ತು. ಅದರಲ್ಲಿ ನಾರು ನಿಗಮದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಎಸ್.ಆರ್.ಗೌಡ, ಮತ್ತು ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರಾಗಿ ಬಿ.ಕೆ.ಮಂಜುನಾಥ್ ಈಗಾಗಲೇ ಅಧಿಕಾರ ವಹಿಸಿಕೊಂಡಿದ್ದಾರೆ.

MLA Nagesh
ಶಾಸಕ ನಾಗೇಶ್

By

Published : Feb 20, 2021, 3:40 PM IST

ತುಮಕೂರು: ಕಾರ್ಮಿಕ ಇಲಾಖೆ ಅಧೀನದ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತಿಪಟೂರು ಶಾಸಕ ನಾಗೇಶ್ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇಮಕ ಮಾಡಿ ಆದೇಶ ಹೊರಡಿಸಿದ್ದರೂ ಅದು ಅನುಷ್ಠಾನಕ್ಕೆ ಬರಲು ತಾಂತ್ರಿಕ ತೊಂದರೆ ಎದುರಾಗಿದೆ.

ಕೇಂದ್ರ ಸರ್ಕಾರದ ನಿಯಮಾವಳಿಯಂತೆ ಕಾರ್ಮಿಕ ಸಚಿವರೇ ಅದರ ಅಧ್ಯಕ್ಷರಾಗಿರಬೇಕಿದೆ. ಹೀಗಾಗಿ ತಿಪಟೂರು ಶಾಸಕ ಬಿ.ಸಿ.ನಾಗೇಶ್​​​ಗೆ ಮಂಡಳಿ ಅಧ್ಯಕ್ಷ ಸ್ಥಾನ ಕೂಡ ದಕ್ಕದಂತಾಗಿದೆ.

ಶಾಸಕ ನಾಗೇಶ್​​ಗೆ ಒಲಿಯದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಜಿಲ್ಲೆಯಲ್ಲಿ ಈಗಾಗಲೇ ಮೂವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಒಲಿದು ಬಂದಿತ್ತು. ಅದರಲ್ಲಿ ನಾರು ನಿಗಮದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಎಸ್.ಆರ್.ಗೌಡ ಮತ್ತು ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರಾಗಿ ಬಿ.ಕೆ.ಮಂಜುನಾಥ್ ಈಗಾಗಲೇ ಅಧಿಕಾರ ವಹಿಸಿಕೊಂಡಿದ್ದಾರೆ.

ಆದರೆ ಎರಡು ಬಾರಿ ಶಾಸಕರಾಗಿರುವ ತಿಪಟೂರು ಶಾಸಕ ಬಿ.ಸಿ.ನಾಗೇಶ್​​​​ಗೆ ಮಾತ್ರ ಕಾರ್ಮಿಕ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದರೂ ಅದನ್ನು ವಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ಕುರಿತಂತೆ ಈಟಿವಿ ಭಾರತ ಜೊತೆ ಮಾತನಾಡಿದ ಶಾಸಕ ನಾಗೇಶ್, ನಾನು ದೇಶ ಕಟ್ಟಲು ಹೊರಟಿರುವವನು. ಸಂಘಟನೆ ಯಾವ ಜವಾಬ್ದಾರಿ ಕೊಡುತ್ತದೆಯೋ ಅದನ್ನು ನಿಭಾಯಿಸುತ್ತೇನೆ. ನಮ್ಮದು ಎಂಬುದು ಇಲ್ಲ. ಪುನಃ ಯಾವುದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇರಿಸಿಲ್ಲ. ಯಡಿಯೂರಪ್ಪ ಅವರೇ ಕಾರ್ಮಿಕ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ತಿಳಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ:ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಸ್ವಾಮೀಜಿಗಳನ್ನೇ ಸಚಿವರನ್ನಾಗಿ ಮಾಡಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ABOUT THE AUTHOR

...view details