ತುಮಕೂರು: ಗುಬ್ಬಿ ತಾಲೂಕಿನ ಮಣಕಿಕುಪ್ಪೆ ಗ್ರಾಮದಲ್ಲಿ ಬಾಲಕನೊಬ್ಬನನ್ನು ಚಿರತೆ ಕೊಂದು ಹಾಕಿದ್ದು, ಅರಣ್ಯ ಇಲಾಖೆ ಬೇಜವಾಬ್ದಾರಿ ತನವೇ ಕಾರಣ ಎಂದು ಆರೋಪಿಸಿ ಗ್ರಾಮಸ್ಥರುಧಿಡೀರನೆ ಪ್ರತಿಭಟನೆ ನಡೆಸಿದರು.
ಚಿರತೆ ದಾಳಿ ತಡೆಯುವಂತೆ ಗ್ರಾಮಸ್ಥರ ಧರಣಿ: ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ - ತುಮಕೂರು ಹೆಬ್ಬೂರು ಗ್ರಾಮದಲ್ಲಿ ಪ್ರತಿಭಟನೆ
ಮಣಕಿಕುಪ್ಪೆ ಗ್ರಾಮದಲ್ಲಿ ಬಾಲಕನೊಬ್ಬನನ್ನು ಚಿರತೆ ಕೊಂದು ಹಾಕಿದ್ದು, ಅರಣ್ಯ ಇಲಾಖೆ ಬೇಜವಾಬ್ದಾರಿ ತನವೇ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲಕಾಲ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಪ್ರತಿಭಟನೆ ಹಿಂಪಡೆಯುವಂತೆ ಪೊಲೀಸರು ಹಲವು ಬಾರಿ ಮನವಿ ಮಾಡಿಕೊಂಡರೂ ಇದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ
ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸುಮಾರು 2 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲಕಾಲ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಪ್ರತಿಭಟನೆ ಹಿಂಪಡೆಯುವಂತೆ ಪೊಲೀಸರು ಹಲವು ಬಾರಿ ಮನವಿ ಮಾಡಿಕೊಂಡರೂ ಇದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಹೀಗಾಗಿ, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.