ತುಮಕೂರು: ಚಿರತೆ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ತರದಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಬಾಲಕಿ ಮೇಲೆ ಚಿರತೆ ದಾಳಿ: ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಯಾನ್ಸ್ಗೆ ದಾಖಲು - ಚಿರತೆ
ರಾಜ್ಯದಲ್ಲಿ ಮತ್ತೆ ಚಿರತೆ ಉಪಟಳ ಹೆಚ್ಚಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಬಾಲಕಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ.
ಬಾಲಕಿ ಮೇಲೆ ಚಿರತೆ ದಾಳಿ, ಗಂಭೀರ ಗಾಯ
ತೋಟದಲ್ಲಿ ಆಟವಾಡುತ್ತಿದ್ದ ಆರು ವರ್ಷದ ರೇಖಾ ಚಿರತೆ ದಾಳಿಗೆ ಒಳಗಾದ ಬಾಲಕಿಯಾಗಿದ್ದಾಳೆ.
ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ಗೆ ಸೇರಿಸಲಾಗಿದೆ.