ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ - ತುಮಕೂರು ಚಿರತೆ ದಾಳಿ
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಟ್ಟಯ್ಯ ಎಂಬ ರೈತ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಕ್ಕಾಪಟ್ಟಣ ಅರಣ್ಯಕ್ಕೆ ಹೊಂದಿಕೊಂಡಂತೆ ಇರುವ ಸರ್ವೇ ನಂಬರ್ 43 ರ ಜಮೀನಿನಲ್ಲಿ ಪುಟ್ಟಯ್ಯ ಕೆಲಸ ಮಾಡುತ್ತಿರುವಾಗ ಚಿರತೆ ಮೈಮೇಲೆ ಎರಗಿದೆ. ಈ ವೇಳೆ ಸುತ್ತಮುತ್ತಲಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಜನರು ಚಿರತೆ ಎರಗುವುದನ್ನು ಕಂಡು ಕೂಗಾಡಿದ್ದಾರೆ. ಜನರ ಚೀರಾಟ ಕೇಳಿದ ಗಂಡು ಚಿರತೆ ಸ್ಥಳದಿಂದ ಪರಾರಿಯಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬಲೆ ಬೀಸಿದ್ದಾರೆ. ಜೊತೆಗೆ ಗಾಯಗೊಂಡ ರೈತನ ಚಿಕಿತ್ಸೆಗೆ ಪೂರಕವಾಗಿ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.