ತುಮಕೂರು:ಜಿಲ್ಲೆಯ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಅಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ಕೊನೆಗೂ ಬೋನಿಗೆ ಬಿದ್ದ ಚಿರತೆ.... ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು - undefined
ಆಹಾರ ಅರಸಿ ಬಂದ ಚಿರತೆಯೊಂದು ಬೋನಿಗೆ ಬಿದ್ದಿದೆ. ಹೀಗಾಗಿ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಬೋನಿಗೆ ಬಿದ್ದ ಚಿರತೆ
ಬೋನಿಗೆ ಬಿದ್ದ ಚಿರತೆ
ಗ್ರಾಮದ ಹೊರವಲಯದಲ್ಲಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸ್ಥಳಾಂತರಿಸಿದ್ದಾರೆ.