ಕರ್ನಾಟಕ

karnataka

ETV Bharat / state

ತುಮಕೂರಿನಲ್ಲಿ ಚಿರತೆ ದಾಳಿಗೆ ಬಲಿಯಾದ ವಯೋವೃದ್ಧ ಮಹಿಳೆ - Woman dead by leopard in thumkuru

ತುಮಕೂರು ಜಿಲ್ಲೆಯ ಬನ್ನಿಕೊಪ್ಪ ಗ್ರಾಮದಲ್ಲಿ ಲಕ್ಷ್ಮಮ್ಮ ಎಂಬ ಮಹಿಳೆಯನ್ನು ಚಿರತೆ ಭೀಕರವಾಗಿ ಕೊಂದು ಹಾಕಿದ್ದು, ಅವರ ಮೃತದೇಹ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಮೃತದೇಹ

By

Published : Oct 17, 2019, 3:02 PM IST

ತುಮಕೂರು: ವಯೋವೃದ್ಧ ಮಹಿಳೆಯೊಬ್ಬರನ್ನು ಚಿರತೆ ದಾಳಿ ನಡೆಸಿ ಭೀಕರವಾಗಿ ಕೊಂದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಮ್ಮ (62) ಚಿರತೆಗೆ ಬಲಿಯಾದ ದುರ್ದೈವಿಯಾಗಿದ್ದಾರೆ.

ನಿನ್ನೆ ಸಂಜೆಯಿಂದ ಬನ್ನಿಕೊಪ್ಪ ಗ್ರಾಮದಿಂದ ಕಣ್ಮರೆಯಾಗಿದ್ದ ಲಕ್ಷ್ಮಮ್ಮ ಅವರಿಗಾಗಿ ಅವರ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಇಂದು ಬೆಳಿಗ್ಗೆ ಅರಣ್ಯ ಪ್ರದೇಶದಲ್ಲಿ ಲಕ್ಷ್ಮಮ್ಮ ಅವರ ಮೃತದೇಹ ಪತ್ತೆಯಾಗಿದ್ದು, ದೇಹದ ಬಹುತೇಕ ಭಾಗವನ್ನು ಚಿರತೆ ತಿಂದುಹಾಕಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಮೃತದೇಹ

ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿದ್ದು, ಜಾನುವಾರುಗಳನ್ನು ತಿಂದು ಹಾಕಿತ್ತು. ಚಿರತೆಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಈಗಾಗಲೇ ಆಗ್ರಹಿಸಿದ್ದರೂ ಸಹ ಅರಣ್ಯ ಇಲಾಖೆ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details