ಕರ್ನಾಟಕ

karnataka

ETV Bharat / state

ತುಮಕೂರಲ್ಲಿ ಕಂಟೈನ್ಮೆಂಟ್​​ ಝೋನ್​ ಹೊರತುಪಡಿಸಿ ಉಳಿದೆಡೆ ವೈನ್ ಶಾಪ್ ತೆರೆಯಲು ಸೂಚನೆ

ತುಮಕೂರು ನಗರದಲ್ಲಿ ಮದ್ಯದಂಗಡಿ ಹಾಗೂ ಎಂಎಸ್ಐಎಲ್ ಅಂಗಡಿಗಳು ಬೆಳಗ್ಗೆ 9 ಗಂಟೆಯಿಂದ ಸಂಜೆ 7ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

Liquor shop opens in Non containment zone at Tumkuru
ತುಮಕೂರಲ್ಲಿ ಕಂಟೈನ್ಮೆಂಟ್​​ ಝೋನ್​ ಹೊರತುಪಡಿಸಿ ಉಳಿದೆಡೆ ವೈನ್ ಶಾಪ್ ತೆರೆಯಲು ಸೂಚನೆ

By

Published : May 7, 2020, 10:50 PM IST

ತುಮಕೂರು: ನಗರದ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಉಳಿದೆಡೆ ವೈನ್ ಶಾಪ್ ಸೇರಿದಂತೆ ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ತುಮಕೂರು ನಗರದಲ್ಲಿ ಕೋವಿಡ್-19 ವೈರಾಣು ನಿಯಂತ್ರಣ ಮತ್ತು ಸಡಿಲಿಕೆ ಕುರಿತು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ವೇಳೆ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಜನಜಂಗುಳಿ ನಿಯಂತ್ರಣದೊಂದಿಗೆ ಅಂಗಡಿಗಳ ಮಾಲಿಕರು ಮತ್ತು ವರ್ತಕರು ಸ್ವಯಂ ಜವಾಬ್ದಾರಿಯಿಂದ ಅಂಗಡಿಗಳನ್ನು ತೆರೆಯಲು ಸೂಚಿಸಿದರು.

ತುಮಕೂರು ನಗರದಲ್ಲಿ ಮದ್ಯದಂಗಡಿ ಹಾಗೂ ಎಂಎಸ್ಐಎಲ್ ಅಂಗಡಿಗಳು ಬೆಳಗ್ಗೆ 9 ಗಂಟೆಯಿಂದ ಸಂಜೆ 7ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಸಿಸಿಟಿವಿ ಅಳವಡಿಸಬೇಕು. ಈ ಬಗ್ಗೆ ಕ್ರಮ ವಹಿಸುವಂತೆ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಅಂಗಡಿಗಳನ್ನು ಬೆಳಗ್ಗೆ 10 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ತುಮಕೂರು ನಗರಕ್ಕೆ ನೇರವಾಗಿ ಸಂಪರ್ಕಿಸುವ ರಸ್ತೆಗಳ ಮೂಲಕ ಬರುವ ಎಲ್ಲಾ ವಾಹನಗಳನ್ನು ತಪಾಸಣೆಗೊಳಪಡಿಸಲು ಅಗತ್ಯವಿರುವ ಕಡೆ ಚೆಕ್ ​ಪೋಸ್ಟ್ ತೆರೆದು ನಗರಕ್ಕೆ ಬರುವ ಜನರನ್ನು ತಪಾಸಣೆಗೊಳಪಡಿಸುವಂತೆ ಸೂಚಿಸಿದರು.

ABOUT THE AUTHOR

...view details