ತುಮಕೂರು :ರಾಜ್ಯದಲ್ಲಿ ಇಂದಿನಿಂದ ಕಠಿಣ ಲಾಕ್ಡೌನ್ ಜಾರಿಯಲ್ಲಿದ್ದರೂ ಸಹ ಅನಾವಶ್ಯಕವಾಗಿ ತಿರುಗಾಡುತ್ತಿದ್ದವರ 515 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ತುಮಕೂರಿನಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ: ಒಂದೇ ದಿನ 551 ವಾಹನಗಳು ಸೀಜ್ - ತುಮಕೂರಿನಲ್ಲಿ ಲಾಕ್ಡೌನ್
ಬೆಳಗ್ಗೆಯಿಂದಲೂ ಪೊಲೀಸರು ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಎಂಬ ಕಠಿಣ ನಿಯಮಾವಳಿಗಳನ್ನು ಅನುಷ್ಠಾನಗೊಳಿಸಲು ಹರಸಾಹಸಪಟ್ಟರು..
ತುಮಕೂರಿನಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ
ತುಮಕೂರು ನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ 239, ಕುಣಿಗಲ್ 56, ಮಧುಗಿರಿ 66, ತಿಪಟೂರು 59, ಶಿರಾ 95 ವಾಹನಗಳನ್ನು ಸೀಜ್ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇನ್ನೊಂದೆಡೆ ಬೆಳಗ್ಗೆಯಿಂದಲೂ ಪೊಲೀಸರು ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಎಂಬ ಕಠಿಣ ನಿಯಮಾವಳಿಗಳನ್ನು ಅನುಷ್ಠಾನಗೊಳಿಸಲು ಹರಸಾಹಸಪಟ್ಟರು. ಪ್ರಮುಖ ವೃತ್ತಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಅನಗತ್ಯವಾಗಿ ಸಂಚರಿಸುವ ವಾಹನ ಸವಾರರಿಗೆ ದಂಡ ವಿಧಿಸಿದರು.