ಕರ್ನಾಟಕ

karnataka

ETV Bharat / state

ಮಧುಗಿರಿಯಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು... ಆತಂಕದಲ್ಲಿ ಜನ

ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸವಾಗಿವೆ. ರಾತ್ರಿ ಹಾಗೂ ಬೆಳಗಿನ ಜಾವ ಆಹಾರ ಅರಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ಹೀಗಾಗಿ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು

By

Published : Jun 25, 2019, 2:53 PM IST

ತುಮಕೂರು:ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕರಡಿ ಸಂಖ್ಯೆ ಹೆಚ್ಚಿದೆ. ನಿತ್ಯ ಹಿಂಡು ಹಿಂಡಾಗಿ ಕಾಣಿಸಿಕೊಳ್ಳತೊಡಗಿರುವುದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮಧುಗಿರಿ ತಾಲೂಕು ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸವಾಗಿದ್ದು, ರಾತ್ರಿ ಹಾಗೂ ಬೆಳಗಿನ ಜಾವ ಆಹಾರ ಅರಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ರಸ್ತೆ, ಹೊಲ, ಕೆರೆ, ಗಿಡಗಳ ಪೊದೆ ಸೇರಿದಂತೆ ಎಲ್ಲೆಂದರಲ್ಲಿ ಕರಡಿಗಳು ಪ್ರತ್ಯಕ್ಷವಾಗುತ್ತಿವೆ.

ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು

ಕತ್ತಲಾದರೆ ಸಾಕು, ಭೀತಿಯಿಂದ ಜನರು ಮನೆಯಿಂದ ಹೊರಬರಲು ಸಹ ಹೆದರುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ABOUT THE AUTHOR

...view details