ತುಮಕೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ನನಗೆ ದೂರವಾಣಿ ಕರೆ ಬಂದಿತ್ತು. ಹೀಗಾಗಿ ಬೆಂಗಳೂರಿನ ಕಡೆಗೆ ತೆರಳುತ್ತಿದ್ದೇನೆ ಎಂದು ಮಾಜಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ಬೆಂಗಳೂರಿಗೆ ಹೊರಟ ಮಾಧುಸ್ವಾಮಿ - Tumkur News
ಮುಖ್ಯಮಂತ್ರಿಗಳು ಬೆಂಗಳೂರಿಗೆ ಆಗಮಿಸುವಂತೆ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂತ್ರಿ ಮಾಡುತ್ತಾರೆ ಎಂಬ ಆಸೆಯಿಂದ ಹೊರಟಿದ್ದೇನೆ ಎಂದು ಮಾಜಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಪೂಜೆ ಸಲ್ಲಿಸಿ ತೆರಳಿದ ಮಾಧುಸ್ವಾಮಿ
ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಂತ್ರಿ ಮಾಡುತ್ತಾರೆ ಎಂಬ ಆಸೆಯಿಂದ ಬೆಂಗಳೂರಿಗೆ ಹೊರಟಿದ್ದೇನೆ. ಅದಕ್ಕೂ ಮುನ್ನ ಗದ್ದುಗೆಗೆ ಪೂಜೆ ಸಲ್ಲಿಸಲು ಬಂದಿದ್ದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ಜಿಲ್ಲೆಯ ತಿಪಟೂರು ಶಾಸಕ ಬಿ.ಸಿ.ನಾಗೇಶ್ಗೂ ಸಚಿವ ಸ್ಥಾನ ಕೊಡಬಹುದು ಎಂದು ಭಾವಿಸಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.