ತುಮಕೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಕೇವಲ ಜೆಡಿಎಸ್ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಶಾಸಕರ ಮಾತುಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಮಧುಗಿರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಜೆಡಿಎಸ್ ಶಾಸಕ ವೀರಭದ್ರಯ್ಯ ಈ ಬಾರಿ ನಿರೀಕ್ಷೆಗೂ ಮೀರಿ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇನೆ ಎಂದಿದ್ದಾರೆ.
ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರವನ್ನು ಕಡೆಗಣನೆ ಮಾಡಲಾಗಿದೆ ಎಂಬ ಆರೋಪಕ್ಕೆ ಪುಷ್ಟಿಕರಿಸುವಂತೆ ಜೆಡಿಎಸ್ ಶಾಸಕರಿರುವ ಮಧುಗಿರಿ ಕ್ಷೇತ್ರಕ್ಕೆ ಅನುದಾನಗಳ ಮಹಾಪೂರವೇ ಹರಿದು ಬಂದಿದೆ. 874.81 ಕೋಟಿ ರೂ ಅನುದಾನ ಮಧುಗಿರಿ ಕ್ಷೇತ್ರಕ್ಕೆ ಹರಿದು ಬಂದಿದ್ದು, ಇದೆಲ್ಲಾ ಮುಖ್ಯಮಂತ್ರಿ ಕುಮಾರಣ್ಣನ ಸಹಕಾರ ಎಂದು ವೀರಭದ್ರಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.