ತುಮಕೂರು: ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ವಾಹನ ದಾಟಿಸಲು ಹೋಗಿ ವಾಹನಸಮೇತ ವ್ಯಕ್ತಿಯೂ ಕೊಚ್ಚಿಹೋದ ಘಟನೆ ಕೊರಟಗೆರೆ ತಾಲೂಕಿನ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ. ಆಂಧ್ರಪ್ರದೇಶದ ಪೆನಗೊಂಡದಿಂದ ತುಮಕೂರಿಗೆ ಅಕ್ಕಿ ಸಾಗಿಸುತ್ತಿದ್ದ ಮಹೇಂದ್ರ ಪಿಕಪ್ ವಾಹನ ಹಾಗು ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ವಾಹನದಲ್ಲಿದ್ದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದುವರೆಗೂ ವಾಹನ ಪತ್ತೆಯಾಗಿಲ್ಲ.