ತುಮಕೂರು: ಉತ್ತಮ ಶಿಕ್ಷಣ ಪಡೆದವರಿಂದಲೇ ಇವತ್ತು ಹಲವಾರು ದುರಂತಗಳು ಮತ್ತು ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.
ಉತ್ತಮ ಶಿಕ್ಷಣ ಪಡೆದವರಿಂದ್ಲೇ ದುರಂತಗಳು ನಡೆಯುತ್ತಿವೆ: ಡಾ.ಸಿ.ಎನ್.ಮಂಜುನಾಥ್ ಕಳವಳ - ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ ಮಂಜುನಾಥ ಆತಂಕ
ಉತ್ತಮ ಶಿಕ್ಷಣ ಪಡೆದವರಿಂದಲೇ ಇವತ್ತು ಹಲವಾರು ದುರಂತಗಳು ಮತ್ತು ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಕಳವಳ ವ್ಯಕ್ತಪಡಿಸಿದರು.
ಜಿಲ್ಲೆಯ ತುರುವೇಕೆರೆ ತಾಲೂಕಿನ ಗುರುಭವನದಲ್ಲಿ ತಾಲೂಕು ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಅನಕ್ಷರತೆ ದೂರವಾಗಬೇಕು. ಇದರಿಂದ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ ಎಂಬುದು ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಆದರೆ ಇಂದು ಪದವಿ ಪಡೆದವರು ಹಲವು ಸಮಸ್ಯೆಗಳಿಗೆ ಕಾರಣರಾಗುತ್ತಿದ್ದಾರೆ. ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಶೇ.50ರಷ್ಟು ಶಿಕ್ಷಣವನ್ನು ಪಡೆಯುತ್ತೇವೆ. ಆದರೆ ಇನ್ನುಳಿದ ಶೇ.50ರಷ್ಟು ಪಾಠವನ್ನು ಬದುಕು ಹಾಗೂ ಜೀವನ ಕಲಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರಿಗೆ ಒಕ್ಕಲಿಗರ ಸಂಘದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು.