ತುಮಕೂರು: ಮೇಯರ್ ಸ್ಥಾನಕ್ಕೆ ಮೀಸಲಾತಿಯ ಕುರಿತಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ತುಮಕೂರು ಪಾಲಿಕೆ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿರುವ ತಕರಾರು ಅರ್ಜಿಯನ್ನು ವಾಪಸ್ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಪಾಲಿಕೆ ಸದಸ್ಯ ಸೈಯದ್ ನಯಾಜ್ ತಿಳಿಸಿದ್ದಾರೆ.
ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಅವರಿಗೆ ನಾವು ನ್ಯಾಯಾಲಯಕ್ಕೆ ಸಲ್ಲಿಸಿರುವ ತಕರಾರು ಅರ್ಜಿಯನ್ನು ವಾಪಸ್ ಪಡೆಯುವುದಾಗಿ ವಾಗ್ದಾನ ಮಾಡಿದ್ದೇವೆ. ಇದಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಮಾಜಿ ಸಚಿವ ಶ್ರೀನಿವಾಸ ಹಾಗೂ ಕಾಂಗ್ರೆಸ್ ಮಾಜಿ ಶಾಸಕ ರಫೀಕ್ ಅಹಮದ್ ಅವರ ಬಳಿ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ವಾಪಸ್ ತೆಗೆದುಕೊಳ್ಳುವುದಾಗಿ ನಿರ್ಧರಿಸಿದ್ದೇವೆ ಎಂದರು.
ತುಮಕೂರು ಮೇಯರ್ ಮೀಸಲಾತಿ ತಕರಾರು ಅರ್ಜಿ ವಾಪಸ್ ಪಡೆಯುತ್ತೇವೆ: ಕಾಂಗ್ರೆಸ್ ಸದಸ್ಯ ಇದನ್ನೇ ನಾವು ಮುಂದುವರೆಸಿಕೊಂಡು ಹೋದರೆ ತುಮಕೂರು ನಗರದ ಅಭಿವೃದ್ಧಿಗೆ ಎಲ್ಲಾ ಪಕ್ಷಗಳ ಪಾಲಿಕೆ ಸದಸ್ಯರು ಒಮ್ಮತದಿಂದ ಕೆಲಸ ಮಾಡಲೂ ಸಾಧ್ಯವಿರುವುದಿಲ್ಲ. ಹೀಗಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಕೋರ್ಟ್ ಕಚೇರಿ ಎಂದು ಪಾಲಿಕೆ ಸದಸ್ಯರು ಕಿತ್ತಾಡಿಕೊಂಡರೆ ತುಮಕೂರು ನಗರದ ಅಭಿವೃದ್ಧಿಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಈಗಾಗಲೇ ಕೊರೊನಾ ಸೋಂಕು ಹರಡುವಿಕೆ ಭೀತಿಯಿಂದ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ನಿರೀಕ್ಷೆಯಂತೆ ನಡೆದಿಲ್ಲ. ಹೀಗಾಗಿ ತಕರಾರು ಅರ್ಜಿಯನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಓದಿ:ತುಮಕೂರು ಪಾಲಿಕೆ ಚುನಾವಣೆ: ಮೇಯರ್ ಆಗಿ ಕೃಷ್ಣಪ್ಪ, ಉಪಮೇಯರ್ ಆಗಿ ನಾಜೀಮಾಬಿ ಅವಿರೋಧ ಆಯ್ಕೆ
ತುಮಕೂರು ಮೇಯರ್ ಸ್ಥಾನವನ್ನು ಎಸ್ಟಿಗೆ ಪುನಃ ಮೂರು ವರ್ಷದ ನಂತರ ಮೀಸಲಿಡಲಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದೆವು. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವುದರಿಂದ, ಅಲ್ಲದೆ ಬಿಜೆಪಿ ಪಕ್ಷದಲ್ಲಿ ಮಾತ್ರ ಎಸ್ಟಿ ಸದಸ್ಯ ಇರುವುದರಿಂದ ಈ ಮೀಸಲಾತಿಯನ್ನು ತರಲಾಗಿದೆ. ಇದರಿಂದ ತೀವ್ರ ಬೇಸರಗೊಂಡು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮೀಸಲಾತಿ ವಿರೋಧಿಸಿ ನ್ಯಾಯಾಲಯದ ಮೊರೆ ಹೋಗಿದ್ದೆವು. ನ್ಯಾಯಾಲಯದ ಸೂಚನೆ ಮೇರೆಗೆ ಈಗಾಗಲೇ ಮೇಯರ್ ಚುನಾವಣೆ ನಡೆದಿದೆ ಎಂದು ಹೇಳಿದರು.