ಕರ್ನಾಟಕ

karnataka

ETV Bharat / state

ತುಮಕೂರಿನಲ್ಲಿ ಡಿಸಿ, ಉಸ್ತುವಾರಿ ಸಚಿವರಿಂದ ಸಭೆ : ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ - ಜೆ.ಸಿ ಮಧುಸ್ವಾಮಿ

ತುಮಕೂರು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು 2019-20ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಡಿಸಿ ರಾಕೇಶ್ ಕುಮಾರ್​​ ಭಾಗಿಯಾಗಿದ್ದು, ಹಲವು ವಿಚಾರಗಳನ್ನು ಚರ್ಚಿಸಿದರು.

Meeting by the Minister in charge And DC, Tumkur
ತುಮಕೂರಿನಲ್ಲಿ ಡಿಸಿ, ಉಸ್ತುವಾರಿ ಸಚಿವರಿಂದ ಸಭೆ

By

Published : May 30, 2020, 6:38 PM IST

Updated : May 30, 2020, 8:59 PM IST

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಮಿಡತೆಗಳು ಎಕ್ಕದ ಗಿಡದ ಎಲೆಗಳನ್ನು ತಿಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ಸಚಿವರಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು 2019-20 ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ತುಮಕೂರಿನಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಸಭೆಯಲ್ಲಿ ಮಳೆಯ ವಿವರ ಪಡೆದು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿ ಸಚಿವರು, ಸರ್ಕಾರದ ಯೋಜನೆಗಳಿಂದ ರೈತರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಚ್ಚರ ವಹಿಸಿ ಎಂದರು.

ಲಾಕ್​ಡೌನ್ ಹಿನ್ನೆಲೆಯಲ್ಲಿ ಮಾವಿನ ವ್ಯಾಪಾರ ಮಾಡಲು ಸರಿಯಾದ ವ್ಯವಸ್ಥೆ ರೈತರಿಗೆ ದೊರೆಯುತ್ತಿಲ್ಲ. ತರಕಾರಿಯನ್ನು ಮನೆಬಾಗಿಲಿಗೆ ತೆಗೆದುಕೊಂಡು ಹೋದಂತೆ ಹಣ್ಣುಗಳನ್ನು ಕೊಂಡೊಯ್ದು ಮಾರಾಟ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಮಧುಗಿರಿ ತಾಲೂಕಿನ ಭಾಗದಲ್ಲಿ ಎಕ್ಕದ ಗಿಡದ ಎಲೆಗಳನ್ನು ಮಿಡತೆಗಳು ತಿಂದ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, ಅಲ್ಲಿನ ಮಿಡತೆಗಳು ಕೇವಲ ಎಕ್ಕದ ಗಿಡದ ಎಲೆಗಳನ್ನು ಮಾತ್ರ ತಿನ್ನುತ್ತಿವೆ. ಈ ಬಗ್ಗೆ ಈಗಾಗಲೇ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.

Last Updated : May 30, 2020, 8:59 PM IST

ABOUT THE AUTHOR

...view details