ತುಮಕೂರು: ನಗರದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆ ಆಗುತ್ತಿದ್ದು, ಅವರಿಗೆಲ್ಲ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ನವಜಾತ ಶಿಶುಗಳ ಆರೈಕೆ ಕೇಂದ್ರ ಹಾಗೂ ಬಾಣಂತಿಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕೊರೊನಾ ಸೋಂಕಿತರಿರುವ ಆವರಣದಲ್ಲೇ ನವಜಾತ ಶಿಶುಗಳ ಆರೈಕೆ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ - ಕೊರೊನಾ
ತುಮಕೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನವಜಾತ ಶಿಶುಗಳಿಗೆ ಸೋಂಕು ತಗಲುದಂತೆ ನೋಡಿಕೊಳ್ಳುವುದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗೆ ಹರಸಾಹಸದ ಕೆಲಸವಾಗಿದೆ.
![ಕೊರೊನಾ ಸೋಂಕಿತರಿರುವ ಆವರಣದಲ್ಲೇ ನವಜಾತ ಶಿಶುಗಳ ಆರೈಕೆ: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ mess in the Tumkur District](https://etvbharatimages.akamaized.net/etvbharat/prod-images/768-512-11532908-thumbnail-3x2-vis.jpg)
ಆಸ್ಪತ್ರೆಯ ಆವರಣದ ಅನತಿದೂರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶಿಶುಗಳನ್ನು ಹಾಗೂ ಬಾಣಂತಿಯರನ್ನು ಆರೈಕೆ ಮಾಡಲು ಪ್ರತ್ಯೇಕವಾಗಿ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಇದಲ್ಲದೆ ನಿತ್ಯ ನೂರಾರು ಮಂದಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ಜಿಲ್ಲಾಸ್ಪತ್ರೆಗೆ ಬರುತ್ತಲೇ ಇದ್ದಾರೆ. ಸಾಲುಗಟ್ಟಿ ನಿಂತು ಗಂಟಲು ದ್ರವ ಪರೀಕ್ಷೆಗೆ ಒಳಗಾಗುತ್ತಿದ್ದಾರೆ.
ಕಳೆದ ವರ್ಷ ತಾಯಿ ಮತ್ತು ಮಗು ಚಿಕಿತ್ಸಾ ಘಟಕವನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಈ ಬಾರಿ ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದೆ ಜಿಲ್ಲಾಸ್ಪತ್ರೆ ಆವರಣದಲ್ಲಿಯೇ ನವಜಾತ ಶಿಶುಗಳು ಹಾಗೂ ಬಾಣಂತಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯವಸ್ಥೆ ಒಂದು ರೀತಿ ಸಾರ್ವಜನಿಕರಲ್ಲಿ ಕೂಡ ಆತಂಕ ಸೃಷ್ಟಿಸಿದೆ.