ತುಮಕೂರು:ಕೆಆರ್ಎಸ್ ಡ್ಯಾಂ ಸುತ್ತಮುತ್ತಲಿನ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮೈನಿಂಗ್ ಚಟುವಟಿಕೆಯನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಕೆಆರ್ಎಸ್ ಅಣೆಕಟ್ಟೆಯ 10 ಕಿ.ಮೀ. ಸುತ್ತಮುತ್ತ ಮೈನಿಂಗ್ ಬಂದ್: ಸಚಿವ ನಿರಾಣಿ - ಕೆಆರ್ಎಸ್ ಡ್ಯಾಮ್ ಲೀಕೇಜ್
ಕೆಆರ್ಎಸ್ ಡ್ಯಾಂ ಸುತ್ತಮುತ್ತಲಿನ 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಲ್ಲಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಸಚಿವ ಮುರುಗೇಶ್ ನಿರಾಣಿ ಹೇಳಿಕೆ
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಈ ಸಂಬಂಧ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ. ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ, ಆತಂಕ ಬೇಡ ಎಂದರು.