ಕರ್ನಾಟಕ

karnataka

ETV Bharat / state

ರಾಜ್ಯವನ್ನು ಕಿತ್ತುತಿನ್ನುವ ಜೆಡಿಎಸ್-ಕಾಂಗ್ರೆಸ್ ಎರಡೂ ಹದ್ದುಗಳೇ.. ಸಚಿವ ಸಿಟಿ ರವಿ ಟೀಕೆ - ಪ್ರವಾಸೋದ್ಯಮ ಖಾತೆ ಸಚಿವ

ತುಮಕೂರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಖಾತೆ ಸಚಿವ ಸಿಟಿ ರವಿ, ರಾಜ್ಯವನ್ನು ಕಿತ್ತುತಿನ್ನುವ ಕೆಲಸದಲ್ಲಿ ತೊಡಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಹದ್ದುಗಳಿದ್ದಂತೆ ಎಂದು ವ್ಯಾಖ್ಯಾನಿಸಿದ್ದಾರೆ.

ಸಚಿವ ಸಿಟಿ ರವಿ

By

Published : Sep 25, 2019, 9:01 PM IST

ತುಮಕೂರು: ರಾಜ್ಯವನ್ನು ಕಿತ್ತುತಿನ್ನುವ ಕೆಲಸದಲ್ಲಿ ತೊಡಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಹದ್ದುಗಳೇ ಎಂದು ಪ್ರವಾಸೋದ್ಯಮ ಖಾತೆ ಸಚಿವ ಸಿಟಿ ರವಿ ವ್ಯಾಖ್ಯಾನಿಸಿದ್ದಾರೆ.

ಜಿಲ್ಲಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳಿಗೆ ಹೊಂದಾಣಿಕೆ ಇಲ್ಲ ಎಂದು ಹೇಳಿದ್ದೆವು. ಅದು ಇಂದು ಬೆಳಕಿಗೆ ಬಂದಿದೆ. ಬಯಲಾಟಕ್ಕಿಂತ ಇವರ ಆಟ ದೊಡ್ಡದಾಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಒಡೆದ ಮನೆಯಾಗಿದೆ. ಜೆಡಿಎಸ್ ಬಂಡಾಯದ ಭೀತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಖಾತೆ ಸಚಿವ ಸಿಟಿ ರವಿ..

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪ್ರಕರಣದಲ್ಲಿ ಅನರ್ಹಗೊಂಡ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಚುನಾವಣಾ ಆಯೋಗವೇ ಅವಕಾಶ ಕಲ್ಪಿಸಿಕೊಟ್ಟಿದೆ. ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ರೀತಿಯ ಅಡ್ಡಿ ಇಲ್ಲ ಎಂದು ಚುನಾವಣಾ ಆಯೋಗವೇ ಸುಪ್ರೀಂಕೋರ್ಟ್ ಮುಂದೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಅನರ್ಹ ಶಾಸಕರೇ ಕಾರಣ ಆಗಿದ್ದು, ಅದನ್ನು ಮರೆಯುವಂತಹ ಕೃತಘ್ನರಲ್ಲ ತಿಳಿಸಿದರು.

ನೆರೆ ಪರಿಹಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ವರದಿಯನ್ನು ಪುನರ್ ಪರಿಶೀಲನೆ ನಡೆಸಿ ಕಳಿಸಿಕೊಡುವಂತೆ ತಿಳಿಸಲಾಗಿದೆ. ದೇಶದ 9 ರಾಜ್ಯಗಳಲ್ಲಿ ನೆರೆ ಭೀತಿ ಇದೆ. ಏಕಕಾಲಕ್ಕೆ ಎಲ್ಲ ರಾಜ್ಯಗಳಿಗೂ ಪರಿಹಾರ ಧನ ಕೇಂದ್ರದಿಂದ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ABOUT THE AUTHOR

...view details