ತುಮಕೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಸಚಿವ ಮಧು ಬಂಗಾರಪ್ಪ ಅವರು ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಹೊರವಲಯದ ಕ್ಯಾತ್ಸಂದ್ರ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಸಚಿವರು ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾರೆ.
ತುಮಕೂರು: ಸಚಿವ ಮಧು ಬಂಗಾರಪ್ಪ ಕಾರಿಗೆ ಲಾರಿ ಡಿಕ್ಕಿ - Minister car accident
ಬೆಂಗಳೂರಿಗೆ ತೆರಳುತ್ತಿದ್ದ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ತುಮಕೂರಿನಲ್ಲಿ ಅಪಘಾತಕ್ಕೀಡಾಗಿದೆ.
Published : Dec 28, 2023, 10:20 AM IST
|Updated : Dec 28, 2023, 10:48 AM IST
ಸಚಿವರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕ್ಯಾತ್ಸಂದ್ರದ ಬಳಿ ಕಾರು ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿ ಉಜ್ಜಿಕೊಂಡು ಹೋಗಿದೆ. ಇದರಿಂದಾಗಿ ಕಾರಿನ ಮುಂಭಾಗ ಕಿತ್ತು ಹೋಗಿದೆ. ಸ್ವಲ್ಪದರಲ್ಲೇ ದುರಂತ ತಪ್ಪಿದೆ. ಬಳಿಕ ಸಚಿವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸರ್ಕಾರಿ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ₹10 ಲಕ್ಷ: ಪರಿಹಾರ ಮೊತ್ತ ಹೆಚ್ಚಿಸಿದ ಕೆಎಸ್ಆರ್ಟಿಸಿ