ತುಮಕೂರು:ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಲಾಖಾವಾರು ಅಧಿಕಾರಿಗಳ ಜೊತೆ ಜಿಲ್ಲಾ ಯೋಜನಾ ಸಮಿತಿ ಸಭೆ ನಡೆಸಲಾಯಿತು.
ತುಮಕೂರು: ಪ್ರತಿಯೊಂದು ಇಲಾಖೆಗಳ ಮಾಹಿತಿ ಪಡೆದ ಸಚಿವ ಮಾಧುಸ್ವಾಮಿ - ಸಚಿವ ಜೆ. ಸಿ ಮಾಧುಸ್ವಾಮಿ
ಮುಂದಿನ ತಿಂಗಳು ಮಾರ್ಚ್ನಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಅದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಯಾವ ಯಾವ ಇಲಾಖೆಗೆ ಎಷ್ಟು ಪ್ರಮಾಣದ ಅನುದಾನ ಬೇಕಾಗುತ್ತದೆ ಎಂಬುದರ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ಪಡೆದಿದ್ದಾರೆ.
ಮುಂದಿನ ತಿಂಗಳು ಮಾರ್ಚ್ನಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಅದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಯಾವ ಯಾವ ಇಲಾಖೆಗೆ ಎಷ್ಟು ಪ್ರಮಾಣದ ಅನುದಾನ ಬೇಕಾಗುತ್ತದೆ ಎಂಬುದರ ಬಗ್ಗೆ ಅಧಿಕಾರಿಗಳಾಗಿ ಜೊತೆ ಸಭೆ ನಡೆಸಿ, ಅಗತ್ಯವಾಗಿರುವ ಅನುದಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ನಮ್ಮ ಜಿಲ್ಲೆಯ ಯೋಜನೆಗಳಿಗೆ ಬೇಕಾಗಿರುವ ಹಣಕಾಸಿನ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗಿದೆ. ಹಾಗಾಗಿ ತುರ್ತಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಯಾವ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಬೇಕು ಎಂಬುದರ ಬಗ್ಗೆ ಪ್ರತಿಯೊಂದು ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಬೇಕು. ಅದನ್ನು ಬಿಟ್ಟು ಕಾಲಹರಣ ಮಾಡಬೇಡಿ ಎಂದು ಅಧಿಕಾರಿಗಳಿಗೆ ಹೇಳಿದರು.