ಕರ್ನಾಟಕ

karnataka

ETV Bharat / state

ಸಿಎಂ ವಿಡಿಯೋ ಕಾನ್ಫರೆನ್ಸ್ ವೇಳೆ ಮಾಧುಸ್ವಾಮಿ ಅಸಮಾಧಾನ - ಮಾಧುಸ್ವಾಮಿ ತೀವ್ರ ಅಸಮಾಧಾನ

ಜಿಲ್ಲೆಗೆ ಮೀಸಲಿಟ್ಟಿರುವ ಆಕ್ಸಿಜನ್ ಪೂರೈಸದೆ ಪರಿಸ್ಥಿತಿ ನಿಭಾಯಿಸುವಂತೆ ತಿಳಿಸಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಧುಸ್ವಾಮಿ ಸಿಎಂ ಬಿಎಸ್​ವೈ ಎದುರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

minister-madhuswami-got-upset-at-the-chief-ministers-video-conference
ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್

By

Published : May 20, 2021, 4:49 PM IST

ತುಮಕೂರು:ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಧುಸ್ವಾಮಿ ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಜಿಲ್ಲೆಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯವನ್ನು ಪೂರೈಸದೆ ಪರಿಸ್ಥಿತಿಯನ್ನು ನಿಭಾಯಿಸುವಂತೆ ಹೇಳುವುದು ಎಷ್ಟು ಸರಿ? ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೇರವಾಗಿ ಪ್ರಶ್ನಿಸಿ ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲೆಗೆ ಮೀಸಲಿಟ್ಟಿರುವ ಆಕ್ಸಿಜನ್ ಪೂರೈಸದೆ ಪರಿಸ್ಥಿತಿ ನಿಭಾಯಿಸುವಂತೆ ತಿಳಿಸಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ವೇಳೆ ಮಾಧುಸ್ವಾಮಿ ಅಸಮಾಧಾನ

ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಕೂಡ ಕೆಲಕಾಲ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರ ಮಾತಿಗೆ ಉತ್ತರಿಸಲಾಗದೆ ತಡಬಡಾಯಿಸಿದರು. ತಕ್ಷಣ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಗೊಂದಲವನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಓದಿ:ಚೈತನ್ಯ ಕಳೆದುಕೊಂಡ ಸರ್ಕಾರದಿಂದ ಉತ್ತರ ಪಡೆಯುವುದಾದರೂ ಹೇಗೆ? ; ಸಿದ್ದರಾಮಯ್ಯ

ABOUT THE AUTHOR

...view details