ತುಮಕೂರು:ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ವತಿಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳ ಕಮಾಂಡ್ ಸೆಂಟರ್ನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.
ಹುಳಿಯಾರು ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಕಡೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಅವುಗಳ ಮೇಲೆ ಹದ್ದಿನ ಕಣ್ಣಿರಿಸಲು ಇದು ಸಹಕಾರಿಯಾಗಿದೆ. ಕಮಾಂಡ್ ಸೆಂಟರ್ ಉದ್ಘಾಟನೆ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.