ಕರ್ನಾಟಕ

karnataka

By

Published : Jan 18, 2020, 8:15 PM IST

ETV Bharat / state

ಜಿ.ಪಂ.ಅಧಿಕಾರಿಗಳೊಂದಿಗೆ ಮಾಧುಸ್ವಾಮಿ ಸಭೆ: ಬೆಳೆ ವಿಮೆ ಕುರಿತು ರೈತರಿಗೆ ಮಾಹಿತಿ ನೀಡಲು ಸೂಚನೆ

ಇಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಧುಸ್ವಾಮಿ ರೈತರಿಗೆ ವಿಮಾ ಯೋಜನೆಗಳ ಬಗ್ಗೆ ತಿಳಿ ಹೇಳುವ ಕಾರ್ಯ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ಅಧಿಕಾರಿಗಳೊಂದಿಗೆ ಮಾಧುಸ್ವಾಮಿ ಸಭೆ
Madhuswamy made a meeting with district panchayat office

ತುಮಕೂರು:ಬೆಳೆ ವಿಮೆ ಯೋಜನೆಯಲ್ಲಿ ಕುಣಿಗಲ್ ತಾಲೂಕು ಹಿಂದೆ ಉಳಿದಿದ್ದು, ಇದರ ಬಗ್ಗೆ ಅಧಿಕಾರಿಗಳು ಗಮನಹರಿಸಿ ರೈತರಿಗೆ ವಿಮಾ ಯೋಜನೆಗಳ ಬಗ್ಗೆ ತಿಳಿಹೇಳುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಧುಸ್ವಾಮಿ ಹೇಳಿದರು.

ಜಿ.ಪಂ ಅಧಿಕಾರಿಗಳೊಂದಿಗೆ ಮಾಧುಸ್ವಾಮಿ ಸಭೆ

ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಜಿಲ್ಲೆಯಲ್ಲಿ ಪಶುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಗಮನವಹಿಸಬೇಕು. ನೀವು ನೀಡುವ ವರದಿಗಳಲ್ಲಿ ಸತ್ಯಕ್ಕೆ ದೂರವಾದ ಮಾಹಿತಿಗಳು ಹೆಚ್ಚಾಗಿವೆ. ಮೇವಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಹೇಳುತ್ತಿದ್ದೀರಿ, ಮುಂದಿನ ದಿನಗಳಲ್ಲಿ ಏನಾದರೂ ಮೇವಿನ ಸಮಸ್ಯೆ ಉಂಟಾದರೆ ಅದಕ್ಕೆ ನೀವೇ ಜವಾಬ್ದಾರಿ ವಹಿಸಿಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ. ಹಾಗಾಗಿ ಮುಂದಿನ ತಿಂಗಳು ಮತ್ತೊಂದು ಸಭೆ ನಡೆಯಲಿದ್ದು, ಅದರಲ್ಲಿ ಎಲ್ಲ ಅಧಿಕಾರಿಗಳು ವಸ್ತುನಿಷ್ಠವಾಗಿ ಮಾಹಿತಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಸಿಇಓ ಶುಭಾ ಕಲ್ಯಾಣ್ ಮುಂತಾದವರು ಹಾಜರಿದ್ದರು.

For All Latest Updates

ABOUT THE AUTHOR

...view details