ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿತ್ತು, ಯಾಕೆ ಅವರು ಅದನ್ನು ನಿಷೇಧ ಮಾಡಲಿಲ್ಲ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ ಮಾಧುಸ್ವಾಮಿ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆಯಲ್ಲೂ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಲ್ಲಿತ್ತು: ಸಚಿವ ಮಾಧುಸ್ವಾಮಿ - Siddaramaiah
ಗೋಹತ್ಯೆ ನಿಷೇಧ ಜಾರಿಗೆ ತರಬಾರದು ರದ್ದು ಮಾಡಬೇಕೆಂದು ಹೇಳುತ್ತಿರುವ ಸಿದ್ದರಾಮಯ್ಯ ನವರು ತಾವು ಸಿಎಂ ಆಗಿದ್ದಾಗಲೇ ಯಾಕೆ ಈ ಕಾರ್ಯ ಮಾಡಲಿಲ್ಲ ಎಂದು ಸಚಿವ ಮಾಧುಸ್ವಾಮಿ ಪ್ರಶ್ನಿಸಿದ್ದಾರೆ.
ಸಚಿವ ಮಾಧುಸ್ವಾಮಿ
ತಿಪಟೂರಿನಲ್ಲಿ ಮಾತನಾಡಿದ ಅವರು, ಈಗ ಗೋಹತ್ಯೆ ನಿಷೇಧ ಜಾರಿಗೆ ತರಬಾರದು ರದ್ದು ಮಾಡಬೇಕೆಂದು ಹೇಳುತ್ತಿರುವ ಸಿದ್ದರಾಮಯ್ಯ ಅವರು ಅಂದೇ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಬಹುದಿತ್ತು ಯಾಕೆ ಮಾಡಲಿಲ್ಲ ಎಂದರು. ಜಾರಿಯಲ್ಲಿರುವ ಕಾಯ್ದೆಯನ್ನು ಮಾತ್ರ ನಾವು ಜಾರಿಗೆ ತರುತ್ತಿದ್ದೇವೆ ಎಂದು ತಿಳಿಸಿದರು.