ಕರ್ನಾಟಕ

karnataka

ETV Bharat / state

ಅಗತ್ಯಕ್ಕೆ ಅನುಗುಣವಾಗಿ ಆಮ್ಲಜನಕ ಪೂರೈಕೆ ಮಾಡಲು ಸಿಎಂಗೆ ಮಾಧುಸ್ವಾಮಿ ಮನವಿ - Madhuswamy appeals to CM

ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

Madhuswamy appeals to supply oxygen as needed
ಸಿಎಂಗೆ ಮಾಧುಸ್ವಾಮಿ ಮನವಿ

By

Published : May 18, 2021, 8:04 AM IST

ತುಮಕೂರು:ಬೇಡಿಕೆಗೆ ಅನುಗುಣವಾಗಿ ಜಿಲ್ಲೆಗೆ ಆಮ್ಲಜನಕ ಪೂರೈಕೆ ಮಾಡಬೇಕು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.‌ಮಾಧುಸ್ವಾಮಿ ಮುಖ್ಯಮಂತ್ರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿಯ ನಡೆದ ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಅಗತ್ಯವಿರುವಷ್ಟು ಆಮ್ಲಜನಕ ಪೂರೈಕೆಯಾಗುತ್ತಿಲ್ಲ. ಕ್ವಾರಿ-ಕೈಗಾರಿಕೋದ್ಯಮಿಗಳ ಸಹಾಯದಿಂದ ಆಮ್ಲಜನಕ ಸಾಂದ್ರಕಗಳ ಪೂರೈಕೆಯ ನೆರವು ಪಡೆಯಲಾಗಿದೆ ಎಂದರು.

ಇದನ್ನೂಓದಿ: ಲಾಕ್​ಡೌನ್ ವಿಸ್ತರಣೆ ಮತ್ತು ಆರ್ಥಿಕ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ತೀರ್ಮಾನ: ಸಿಎಂ

ಮೊದಲನೇ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ಪಡೆಯಲು 12 ರಿಂದ 16 ವಾರಗಳ ಸಮಯ ನೀಡಲಾಗಿತ್ತು. ಈ ಪೈಕಿ ಇನ್ನೂ ಕೆಲವರು ಲಸಿಕೆ ಪಡೆಯಲು ಬರಲಿಲ್ಲ ಎಂದು ಸಚಿವರು ಸಿಎಂಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, 12 ರಿಂದ 16 ವಾರಗಳ ಸಮಯ ಕೊಟ್ಟರೂ ಲಸಿಕೆ ಪಡೆಯಲು ಬರದವರನ್ನು ಕಾಯಬೇಡಿ, ಇರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ಆಗಿ ಕೊಡಿ ಎಂದು ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.‌ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್ ಬಾಬು ಸೇರಿದಂತೆ ಇತರರು ಇದ್ದರು.

ABOUT THE AUTHOR

...view details