ತುಮಕೂರು: ಮೈಸೂರು ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡೆಯನ್ನು ಮತದಾರರು ಗಮನಿಸುತ್ತಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕೊನೆ ಕ್ಷಣದಲ್ಲಿ ಒಳಒಪ್ಪಂದ: ಸಚಿವ ಸೋಮಶೇಖರ್ - ST Somashekhar
ಮೈಸೂರು ಪಾಲಿಕೆ ಚುನಾವಣೆಯಲ್ಲಿನ ಎಲ್ಲಾ ಬೆಳವಣಿಗೆಗಳನ್ನು ಮತದಾರರು ಗಮನಿಸುತ್ತಿದ್ದಾರೆ. ಮೈಸೂರು ಪಾಲಿಕೆ ಮೇಯರ್ ಹಾಗೂ ಉಪಮೇಯರ್ಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಹಕಾರ ನೀಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೈತ್ರಿ ತಪ್ಪಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ನಾವು ಹೋಗಲ್ಲ ಎಂಬ ನಿಲುವು ಹೊಂದಿದ್ದರು ಎಂದರು.
ನಮಗೆ ಮೆಜಾರಿಟಿ ಇರಲಿಲ್ಲ. ಇಬ್ಬರ ಹೇಳಿಕೆ ಗಮನಿಸಿ ನಾವು ಮತ್ತು ನಮ್ಮ ಪಕ್ಷವು ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಎಲ್ಲಾ ಪ್ರಯತ್ನ ಮಾಡಿದೆವು. ಕೊನೆ ಕ್ಷಣದಲ್ಲಿ ಒಳಒಪ್ಪಂದ ಮಾಡಿಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ಕೆಲಸ ಮಾಡುತ್ತೇವೆ. ಅಲ್ಲದೆ ಮುಂದಿನ ಪಾಲಿಕೆ ಚುನಾವಣೆಯಲ್ಲಿ ಶೇಕಡಾ 100ರಷ್ಟು ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸುತ್ತೇವೆ ಎಂದರು.