ತುಮಕೂರು:ದೊಡ್ಡಗೌಡರನ್ನು ಗೆಲ್ಲಿಸಿಕೊಂಡು ಬರ್ತೀನಿ, ಇಲ್ಲಾ ಅಂದ್ರೆ ನನ್ನ ರಾಜೀನಾಮೆ ಪತ್ರದ ಜೊತೆ ಬರ್ತೀನಿ... ಹೀಗಂತ ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ನಲ್ಲಿ ಪೋಸ್ಟ್ ಹಾಕಿಕೊಳ್ಳುವ ಮೂಲಕ ಇದೀಗ ಸುದ್ದಿಗೆ ಗ್ರಾಸವಾಗಿದ್ದಾರೆ.
ಚರ್ಚೆಗೆ ಗ್ರಾಸವಾದ ಸಚಿವರ ಫೇಸ್ಬುಕ್ ಪೋಸ್ಟ್: ಏಕೆ ಗೊತ್ತಾ? - ಮತದಾನ
ಜೆಡಿಎಸ್ ಶಾಸಕರೊಬ್ಬರು ಮಾಜಿ ಪ್ರಧಾನಿ ದೇವೇಗೌಡರನ್ನು ಗೆಲ್ಲಿಸಿಕೊಂಡು ಬರುವುದಾಗಿ ಪೇಸ್ಬುಕ್ನಲ್ಲಿ ಹಾಕಿಕೊಂಡಿರುವ ಪೋಸ್ಟ್ ಇದೀಗ ವೈರಲ್ ಆಗಿದೆ.
ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಹಾಗು ಸಚಿವ ಶ್ರೀನಿವಾಸ್, ಮತದಾನಕ್ಕೂ ಮುನ್ನ ಹಾಕಿದ ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ನಿನ್ನೆ ಮತದಾನವೂ ಮುಗಿದಿದೆ. ಕಾಂಗ್ರೆಸ್ - ಜೆಡಿಎಸ್ ಪಕ್ಷಗಳಿಗೆ ಗೌಡರ ಗೆಲುವು ಪ್ರತಿಷ್ಠೆಯ ಪ್ರಶ್ನೆಯಾಗಿದೆ.ಇದೀಗ ಕ್ಷೇತ್ರದಲ್ಲಿ ಮಾತ್ರವಲ್ಲ, ರಾಜ್ಯದೆಲ್ಲೆಡೆ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ಚರ್ಚೆಯಾಗುತ್ತಿದ್ದಂತೆ ಸಚಿವ ಶ್ರೀನಿವಾಸ್ ಅವರ ಫೇಸ್ಬುಕ್ ಪೋಸ್ಟ್ ಕುತೂಹಲ ಕೆರಳಿಸಿದೆ.