ತುಮಕೂರು:ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ ಸಚಿವರಾದ ಬಿ.ಸಿ. ಪಾಟೀಲ್ ಹಾಗೂ ಎಸ್.ಟಿ. ಸೋಮಶೇಖರ್ ಭೇಟಿ ನೀಡಿದ್ದು, ಶ್ರೀಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಮಠಕ್ಕೆ ತೆರಳಿ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಪಕ್ಷದಲ್ಲಿ ಬಂಡಾಯವಿಲ್ಲ, ವಿಶ್ವನಾಥ್‌ಗೆ ಮುಂದಿನ ದಿನಗಳಲ್ಲಿ ಅವಕಾಶ: ಎಸ್.ಟಿ.ಸೋಮಶೇಖರ್ - ಸಿದ್ಧಗಂಗಾ ಮಠಕ್ಕೆ ಸಚಿವ ಬಿ.ಸಿ ಪಾಟೀಲ್ ಭೇಟಿ ಸುದ್ದಿ
ಮುಂದಿನ ದಿನಗಳಲ್ಲಿ ಹೆಚ್.ವಿಶ್ವನಾಥ್ ಅವರಿಗೆ ಅವಕಾಶ ಕೊಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಹೈಕಮಾಂಡ್ ನಿರ್ಧಾರವನ್ನು ವಿಶ್ವನಾಥ್ ಕೂಡಾ ಒಪ್ಪಿಕೊಂಡಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸಿದ್ದಗಂಗಾ ಮಠಕ್ಕೆ ಭೇಟಿ
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಮುಂದಿನ ದಿನಗಳಲ್ಲಿ ಹೆಚ್.ವಿಶ್ವನಾಥ್‌ಗೆ ಅವಕಾಶ ಕೊಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಹೈಕಮಾಂಡ್ ನಿರ್ಧಾರವನ್ನು ವಿಶ್ವನಾಥ್ ಅವರೂ ಕೂಡಾ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಕೇಂದ್ರದಿಂದ ಬರುವ ಅನುದಾನ ಎಲ್ಲರಿಗೂ ಸಿಗಲಿ ಎಂದು ಬಿಜೆಪಿ ಅಧ್ಯಕ್ಷರ ಮೂಲಕ ಮನವಿ ಮಾಡಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Last Updated : Jun 19, 2020, 11:14 AM IST