ಕರ್ನಾಟಕ

karnataka

ETV Bharat / state

ಕೊರೊನಾ ಬಗ್ಗೆ ಜನರಲ್ಲಿರುವ ತಪ್ಪು ಭಾವನೆ ಹೋಗಲಾಡಿಸಬೇಕು; ತುಮಕೂರು ಡಿಸಿ - ಕೊರೊನಾ ಬಗ್ಗೆ ಜನರಲ್ಲಿರುವ ತಪ್ಪು ಭಾವನೆ

ಕೋವಿಡ್​ ಪರೀಕ್ಷೆ ಹೆಸರಲ್ಲಿ ಸರ್ಕಾರ ದುಡ್ಡು ಹೊಡೆಯುತ್ತಿದೆ ಎಂಬ ಜನರ ಮನಸ್ಸಿನಲ್ಲಿರುವ ತಪ್ಪು ಭಾವನೆಯನ್ನು ಹೋಗಲಾಡಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್​​ ಕುಮಾರ್​​ ತಿಳಿಸಿದರು.

misconceptions about Corona should be eliminated tumkuru DC said
ಕೋವಿಡ್​​ ವಾರಿಯರ್ಸ್

By

Published : Sep 12, 2020, 6:03 PM IST

ತುಮಕೂರು : ಕೊರೊನಾ ಪಾಸಿಟಿವ್ ಎಂದು ಹೇಳಿ ಸರ್ಕಾರ ದುಡ್ಡು ಹೊಡೆಯುವ ಕಾರ್ಯ ಮಾಡುತ್ತಿದೆ ಎಂಬ ತಪ್ಪು ಕಲ್ಪನೆಯನ್ನು ಜನರ ಮನಸ್ಸಿನಿಂದ ಹೋಗಲಾಡಿಸುವ ಕಾರ್ಯ ನಮ್ಮಿಂದ ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಮೆಡಿಕಲ್ ಲ್ಯಾಬ್ ಟೆಕ್ನಾಲಾಜಿಸ್ಟ್ ಅಸೋಸಿಯೇಷನ್, ಮೆಡಿಕಲ್ ಲ್ಯಾಬರೋಟರಿ ಟೆಕ್ನಾಲಾಜಿಸ್ಟ್ ಅಸೋಸಿಯೇಷನ್, ಸರ್ಕಾರಿ ವೈದ್ಯಕೀಯ ಪ್ರಯೋಗ ಶಾಲಾ ಟೆಕ್ನಾಲಜಿಸ್ಟ್ ಸಂಘಗಳ ಸಂಯುಕ್ತಾಶ್ರಯದಲ್ಲಿ ಕೋವಿಡ್​​ ವಾರಿಯರ್ಸ್​ಗಳಿಗೆ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕೋವಿಡ್​​ ವಾರಿಯರ್ಸ್​ಗಳಿಗೆ ಅಭಿನಂದನಾ ಕಾರ್ಯಕ್ರಮ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕೋವಿಡ್ ಇನ್ನು ಹೋಗಿಲ್ಲ. ಲಾಕ್​ಡೌನ್ ಸಡಿಲಗೊಂಡ ನಂತರ ಸಾರ್ವಜನಿಕರು ಮಾಸ್ಕ್ ಹಾಕದೆ, ಅಂತರ ಕಾಯ್ದುಕೊಳ್ಳದೆ, ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಈ ರೀತಿ ಆಗಬಾರದು. ಇವರಿಗೆ ನಾವು ಸೋಂಕಿನ ಬಗ್ಗೆ ತಿಳಿಹೇಳುವ ಕಾರ್ಯ ಮಾಡಬೇಕಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೂ, ಸಾರ್ವಜನಿಕ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮಗಳನ್ನು ಪಾಲಿಸಬೇಕು ಎಂದು ಇದೇ ವೇಳೆ ಸೂಚನೆ ಕೊಟ್ಟರು.

ABOUT THE AUTHOR

...view details