ತುಮಕೂರು:ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ಆಟೋಗಳು, ಕೆಎಸ್ಆರ್ಟಿಸಿ ಬಸ್ಗಳು ಮತ್ತು ಖಾಸಗಿ ಬಸ್ಗಳು ನಿರಾತಂಕವಾಗಿ ಸಂಚರಿಸುತ್ತಿವೆ. ಜನಜೀವನ ಕೂಡ ಸಹಜ ಸ್ಥಿತಿಯಲ್ಲಿದೆ.
ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ: ಗ್ರೌಂಡ್ ರಿಪೋರ್ಟ್ ಓದಿ:'ಬಿಜೆಪಿಯಿಂದ ದೇಶಕ್ಕೆ ಉಳಿಗಾಲವಿಲ್ಲ': ಭಾರತ್ ಬಂದ್ಗೆ ಬೆಂಬಲಿಸುವಂತೆ ಸಿದ್ದರಾಮಯ್ಯ ಕರೆ
ತುಮಕೂರಿನಿಂದ ಬೆಂಗಳೂರು ಕಡೆಗೆ ಕೆಎಸ್ಆರ್ಟಿಸಿ ಬಸ್ಗಳು ಕಡಿಮೆ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ಈ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆ ಇದೆ.