ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ವ್ಯಾಪ್ತಿಯಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಐಸಿಯು ಬೆಡ್ ಹಾಗೂ ಆಕ್ಸಿಜನ್ ಬೆಡ್ಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಶಾಸಕ ರಂಗನಾಥ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಕುಣಿಗಲ್ನಲ್ಲಿ ಮೌನ ಪ್ರತಿಭಟನೆ ನಡೆಸಿದ ಶಾಸಕ ರಂಗನಾಥ ಹಾಗೂ ಬೆಂಬಲಿಗರು, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಆಕ್ಸಿಜನ್ ಕೊರತೆಯಿಂದ ಬಳಲುತ್ತಿರುವ ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕೂಡ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಬಡ ರೋಗಿಗಳು ಪ್ರಾಣ ಬಿಡುತ್ತಿದ್ದಾರೆ. ತಕ್ಷಣ ಸರ್ಕಾರ ಇತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.