ಕರ್ನಾಟಕ

karnataka

ಪ್ರಜ್ಞಾವಂತ ಮತದಾರರು ನನ್ನನ್ನು ಗೆಲ್ಲಿಸುವ ಭರವಸೆಯಿದೆ: ಎಂ.ಪಿ. ಕರಬಸಪ್ಪ

By

Published : Oct 16, 2020, 4:09 PM IST

ರಾಜಕೀಯ ಪಕ್ಷಗಳಲ್ಲಿ ಬಂಡಾಯ ಉಂಟಾಗಿರುವುದರಿಂದ ಈ ಬಾರಿ ಮತದಾರರು ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುತ್ತಾರೆ ಎಂಬ ಭರವಸೆಯಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಂ.ಪಿ. ಕರಬಸಪ್ಪ ಹೇಳಿದ್ದಾರೆ.

Karabasappa
ಎಂ.ಪಿ ಕರಬಸಪ್ಪ

ತುಮಕೂರು: ರಾಜಕೀಯ ಪಕ್ಷಗಳಲ್ಲಿ ಬಂಡಾಯ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರಿಂದ ಪ್ರಜ್ಞಾವಂತ ಮತದಾರರು ನನ್ನ 25ವರ್ಷಗಳ ಹೋರಾಟವನ್ನು ಗುರುತಿಸಿ, ಈ ಬಾರಿ ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುತ್ತಾರೆ ಎಂಬ ಭರವಸೆಯಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಂ.ಪಿ. ಕರಬಸಪ್ಪ ತಿಳಿಸಿದರು.

ಪಕ್ಷೇತರ ಅಭ್ಯರ್ಥಿ ಎಂ.ಪಿ. ಕರಬಸಪ್ಪ

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ರಾಜಕೀಯ ಪಕ್ಷಗಳಲ್ಲಿ ಬಂಡಾಯ ಉಂಟಾಗಿರುವುದರಿಂದ ಈ ಬಾರಿ ಮತದಾರರು ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುತ್ತಾರೆ ಎಂಬ ಭರವಸೆಯಿದೆ ಎಂದರು.

ಕಳೆದ 25 ವರ್ಷಗಳಿಂದ ಚುನಾವಣೆಯಲ್ಲಿ ಹಾಗೂ ಸಂಘಟನೆಗಳಲ್ಲಿ ಪಾಲ್ಗೊಳ್ಳುತ್ತಿದ್ದೇನೆ, ಅಂದಿನಿಂದಲೂ ಅನೇಕ ಸಮಸ್ಯೆಗಳ ವಿರುದ್ಧ ಹೋರಾಡುವ ಮೂಲಕ ಯಶಸ್ಸು ಕಂಡಿದ್ದೇನೆ. ಅತಿಥಿ ಉಪನ್ಯಾಸಕರ, ಉಪನ್ಯಾಸಕರ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ‌. ಅಲ್ಲದೇ ಸರ್ಕಾರದ ಯೋಜನೆಗಳಲ್ಲಿಯೂ ಶಿಕ್ಷಕರಿಗೆ ನೀಡುವ ಅನುದಾನಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾಗಿ ಹಾಗೂ ರಾಜ್ಯ ಪದವಿಪೂರ್ವ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾಗಿ ಸಂಘಟನೆಯಲ್ಲಿ ತೊಡಗಿಕೊಂಡಿರುವುದರಿಂದ ಶಿಕ್ಷಕರ, ಉಪನ್ಯಾಸಕರ, ನೌಕರರ ಸಮಸ್ಯೆಗಳ ಬಗ್ಗೆ ಹೆಚ್ಚಿನದಾಗಿ ತಿಳಿದಿದೆ. ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಅಷ್ಟೇ ಅಲ್ಲದೇ ನಿರುದ್ಯೋಗ ಸಮಸ್ಯೆ ನಿವಾರಿಸಲು, ಶಿಕ್ಷಕರ ಕೊರತೆಗಳನ್ನು ನೀಗಿಸಲು ಎಲ್ಲಾ ಮತದಾರರು ನನಗೆ ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟರು.

ABOUT THE AUTHOR

...view details