ಕರ್ನಾಟಕ

karnataka

ETV Bharat / state

ತುಮಕೂರಿಗಿಂದು ಮೋದಿ ಆಗಮನ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ

ಇಂದು ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Modi
ಮೋದಿ

By

Published : Jan 2, 2020, 9:50 AM IST

ತುಮಕೂರು: ನಗರದಲ್ಲಿಂದು ಪ್ರಧಾನಿ ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಮತ್ತು ಎಂಪ್ರೆಸ್ ಕಾಲೇಜಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಪ್ರಧಾನಿ ಆಗಮನಕ್ಕೆ ಸಜ್ಜಾಗಿರುವ ತುಮಕೂರು

ಇನ್ನೊಂದೆಡೆ ಸಿದ್ಧಗಂಗಾ ಮಠದಲ್ಲಿ ಮೋದಿ ಕಾರ್ಯಕ್ರಮ ಇರುವ ಹಿನ್ನೆಲೆ ಸಿದ್ಧಗಂಗಾ ಮಠದ ಸುತ್ತಮುತ್ತಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ನಗರದ ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ರೈತಸಂಘದ ಮುಖಂಡರೊಂದಿಗೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.

ABOUT THE AUTHOR

...view details