ತುಮಕೂರು:ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಸೋಲಿಗೆ ಮೋದಿ ಅಲೆ ಕಾರಣ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್ ಆರ್ ಶ್ರೀನಿವಾಸ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಪ್ರಭಾವವೇ ಈ ರೀತಿಯಾದ ಫಲಿತಾಂಶಕ್ಕೆ ಕಾರಣ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಲೆ ಇತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ಗೆ ಉತ್ತಮ ಬೆಂಬಲವಿತ್ತು. ಆದರೆ ಈ ಬಾರಿ ಅಲ್ಲಿಯೂ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಆಶಯದಿಂದ ಮತದಾರರು ಬಿಜೆಪಿಗೆ ಮತ ಹಾಕಿದ್ದಾರೆ. ಇದು ತುಮಕೂರಿನಲ್ಲಿ ಕೂಡಾ ಪ್ರತಿಧ್ವನಿಸಿದೆ ಎಂದು ಹೇಳಿದರು.