ಕರ್ನಾಟಕ

karnataka

ETV Bharat / state

ನಮೋ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಲಿದ್ದಾರೆ: ಸಿಎಂ ಯಡಿಯೂರಪ್ಪ - ತುಮಕೂರಿಗೆ ಆಗಮಿಸಲಿರುವ ಮೋದಿ ಲೆಟೆಸ್ಟ್ ನ್ಯೂಸ್​

ಪ್ರಧಾನಿ ನರೇಂದ್ರ ಮೋದಿ ನಾಳೆ ತುಮಕೂರಿಗೆ ಭೇಟಿ ನೀಡಲಿದ್ದಾರೆ. ತುಮಕೂರು ನಗರದ ಸರಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 2 ನೇ ಹಂತ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸಿಎಂ ಯಡಿಯೂರಪ್ಪ
CM Yeddyurappa

By

Published : Jan 1, 2020, 11:54 PM IST

ತುಮಕೂರು :ನಾಳೆ ಪ್ರಧಾನಿ ನರೇಂದ್ರ ಮೋದಿಯವರು ನಗರಕ್ಕೆ ಆಗಮಿಸುತ್ತಿದ್ದು, ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನಿಷ್ಠ ಒಂದೂವರೆ ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಮೋದಿ ಅವರ ಕಾರ್ಯಕ್ರಮ ನಡೆಯಲಿರುವ ಜೂನಿಯರ್ ಕಾಲೇಜು ಮೈದಾನ ಮತ್ತು ಶ್ರೀ ಸಿದ್ಧಗಂಗಾ ಮಠದಲ್ಲಿ ಭದ್ರತೆ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಅಂದು 2:15ಕ್ಕೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ನಮೋ ಅಲ್ಲಿ ಸ್ವಾಮೀಜಿಗಳನ್ನ ಭೇಟಿ ಮಾಡಿ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.

ಸಂವಾದ ನಂತರ ನೇರವಾಗಿ ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಬರಲಿರುವ ಪ್ರಧಾನಿ ಮೋದಿಯವರು ಸಂಜೆ 5 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 29 ರೈತರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ನಗರದ ವಿವಿಧೆಡೆ ಎಲ್ಇಡಿ ಸ್ಕ್ರೀನ್​ಗಳನ್ನು ಅಳವಡಿಸಲಾಗುತ್ತದೆ. ನಗರದ ರಿಂಗ್ ರಸ್ತೆ, ಸಿರಾ ರಸ್ತೆ ಸೇರಿದಂತೆ ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವಂತಹ ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ, ಮಣಿಪುರ ಮುಖ್ಯಮಂತ್ರಿ ಮತ್ತು ಉತ್ತರಾಖಂಡ್ ರಾಜ್ಯಪಾಲರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details