ತುಮಕೂರು: ರಾಜ್ಯಾದ್ಯಂತ ಒಂದು ವಾರಗಳ ಕಾಲ ಮೆಡಿಕಲ್ ಎಮರ್ಜೆನ್ಸಿಯನ್ನ ಸರ್ಕಾರ ಘೋಷಣೆ ಮಾಡಿದೆ. ಇದಕ್ಕೆ ಪೂರಕವಾಗಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಗಮನವನ್ನು ಕೊಡಲಾಗುತ್ತಿದೆ ಎಂದು ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ: ಭಕ್ತರಿಗೆ ಅಭಯ ನೀಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ - ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಗಮನವನ್ನು ಕೊಡಲಾಗುತ್ತಿದೆ. ಮಠಕ್ಕೆ ಬರುವ ಭಕ್ತರು ಯಾವುದೇ ರೀತಿಯ ಆತಂಕ ಪಡಬೇಕಿಲ್ಲ ಎಂದು ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
![ಸಿದ್ದಗಂಗಾ ಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ: ಭಕ್ತರಿಗೆ ಅಭಯ ನೀಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ Siddaganga matha](https://etvbharatimages.akamaized.net/etvbharat/prod-images/768-512-6401788-thumbnail-3x2-bin.jpg)
ಸಿದ್ದಗಂಗಾಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ
ಸಿದ್ದಗಂಗಾಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಠಕ್ಕೆ ಬರುವ ಭಕ್ತರು ಯಾವುದೇ ರೀತಿಯ ಆತಂಕ ಪಡಬೇಕಿಲ್ಲ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಸಾರ್ವಜನಿಕರು ಇದಕ್ಕೆ ಸಾಥ್ ನೀಡಬೇಕು ಎಂದು ತಿಳಿಸಿದರು.
ಮಠದ ವಿದ್ಯಾರ್ಥಿಗಳಿಗೆ ಇದು ಪರೀಕ್ಷಾ ಸಮಯವಾಗಿದೆ. ಪರೀಕ್ಷೆ ಪೂರ್ಣಗೊಂಡ ನಂತರ ಅವರು ತಮ್ಮ ಊರುಗಳಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.