ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ಗಳ ಎಡವಟ್ಟಿನಿಂದ ತಾಯಿ-ಮಗು ಬಲಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಮಧುಗಿರಿ ತಾಲೂಕಿನ ಬ್ರಹ್ಮದೇವರಹಳ್ಳಿ ಗ್ರಾಮದ ನಿವಾಸಿ ಕಮಲಮ್ಮ ಮೃತರು. ಹೆರಿಗೆಗೆ ಹೊಸಕೆರೆ ಆಸ್ಪತ್ರೆಗೆ ಬಂದಿದ್ದ ವೇಳೆ ಈ ಅವಘಡ ನಡೆದಿದೆ.
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿನ ನರ್ಸ್ಗಳೇ ಚಿಕಿತ್ಸೆ ನೀಡಿದ್ದರಿಂದ ಹಸುಗೂಸು ಮೃತಪಟ್ಟಿದೆ. ನಂತರ ತಾಯಿ ಚಿಂತಾಜನಕ ಸ್ಥಿತಿಯಲ್ಲಿದ್ದರಿಂದ ಆ್ಯಂಬುಲೆನ್ಸ್ ಇಲ್ಲದೇ ಕಮಲಮ್ಮ ಕುಟುಂಬಸ್ಥರು ಪರದಾಡಿದ್ದಾರೆ. ನಂತರ ಅವರನ್ನು ಕಾರಿನಲ್ಲಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ತಾಯಿ ಕೂಡ ಮೃತಪಟ್ಟಿದ್ದಾರೆ.