ತುಮಕೂರು: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿಪಕ್ಷದವರು ದುರುಪಯೋಗ ಮಾಡಿಕೊಂಡು ಹಿಟ್ಲರ್ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಂಸದ ಜಿ.ಎಸ್.ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು.
ವಿರೋಧ ಪಕ್ಷದವರಿಂದ ಪೌರತ್ವ ಕಾಯ್ದೆ ದುರುಪಯೋಗ: ಸಂಸದ ಬಸವರಾಜ್
ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೆ ಬರಬೇಕು ಎಂದು ಅಂದಿನ ಪ್ರಧಾನಿ ನೆಹರು ಹಾಗೂ ಮಹಾತ್ಮ ಗಾಂಧೀಜಿ ಅಭಿಪ್ರಾಯಪಟ್ಟಿದ್ದರು. ಆದರೆ ಇಂದು ವಿರೋಧ ಪಕ್ಷದವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸಂಸದ ಜಿ.ಎಸ್. ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಬಸವರಾಜ್
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಸೇರಿದಂತೆ ವಿದೇಶದಲ್ಲಿ ಬೌದ್ಧರು, ಜೈನರು, ಸಿಖ್ಖರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರಿಗೆ ಭಾರತದಲ್ಲಿ ಪೌರತ್ವ ನೀಡುವ ಮೂಲಕ ನ್ಯಾಯ ಒದಗಿಸಿಕೊಡಲು ಈ ಕಾಯ್ದೆ ಸಹಕಾರಿಯಾಗಲಿದೆ ಎಂದರು.