ಕರ್ನಾಟಕ

karnataka

ETV Bharat / state

ಲೋಕಸಭಾ ಚುನಾವಣೆಯಲ್ಲಿ 100%ರಷ್ಟು ಮತದಾನವಾಗಬೇಕು: ಡಿಸಿ ಡಾ ಕೆ ರಾಕೇಶ್ ಕುಮಾರ್ - ತುಮಕೂರು

ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ ಮಾತ್ರ ಜಿಲ್ಲೆಯಲ್ಲಿ 100 % ರಷ್ಟು ಮತದಾನ ಸಾಧ್ಯ ಎಂದರು.

ಡಿಸಿ ಡಾ ಕೆ ರಾಕೇಶ್ ಕುಮಾರ್

By

Published : Mar 21, 2019, 1:15 AM IST

ತುಮಕೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಶೇಕಡ 100%ರಷ್ಟು ಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ರಾಕೇಶ್ ಕುಮಾರ್ ತಿಳಿಸಿದರು.

ಡಿಸಿಡಾ ಕೆ ರಾಕೇಶ್ ಕುಮಾರ್

ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾನ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಆಟೋ, ಬಸ್​ಗ​​ಳ ಮೇಲೆ ಸ್ಟಿಕರ್ ಅಂಟಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಾದ್ಯಂತ ಈಗಾಗಲೇ ಮತದಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಆ ಮೂಲಕ ಜನರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ ಮಾತ್ರ ಜಿಲ್ಲೆಯಲ್ಲಿ 100 % ರಷ್ಟು ಮತದಾನ ಸಾಧ್ಯ ಎಂದರು.

ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿ, ದೇಶದ ಅಭಿವೃದ್ಧಿಗಾಗಿ ಅರ್ಹ ನಾಯಕರನ್ನು ಆಯ್ಕೆ ಮಾಡಬೇಕು.ಆ ಮೂಲಕ ತಮ್ಮ ಕರ್ತವ್ಯ ಪ್ರಜ್ಞೆ ಮೆರೆಯಬೇಕು ಎಂದು ಹೇಳಿದರು.

ABOUT THE AUTHOR

...view details