ಕರ್ನಾಟಕ

karnataka

ETV Bharat / state

ನರೇಂದ್ರ ಮೋದಿ ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ: ಸಿ. ಯತಿರಾಜು ಆರೋಪ - all India kishan sangha

ಕೃಷಿ ಉತ್ಪನ್ನಗಳಿಗೆ ಉತ್ಪನ್ನ ವೆಚ್ಚದ ಶೇಕಡ 50ರಷ್ಟು ಲಾಭವನ್ನು ಸೇರಿಸಿ, ಕನಿಷ್ಠ ಬೆಂಬಲ ಬೆಲೆ ಖಾತರಿಗೊಳಿಸುವ ಕಾನೂನು ಹಾಗೂ ಎಲ್ಲಾ ರೈತರು, ಕೃಷಿ ಕೂಲಿಕಾರರಿಗೆ ಅಗತ್ಯವಿರುವ ಬ್ಯಾಂಕ್ ಸಾಲ ನೀಡಿಕೆ, ಸಾಲ ಮನ್ನಾ ಇತ್ಯಾದಿ ಅಂಶಗಳಿಗೆ ಸಂಬಂಧಿಸಿದಂತೆ ಋಣಮುಕ್ತ ಕಾಯಿದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆ

By

Published : Aug 3, 2019, 9:18 PM IST

ತುಮಕೂರು:ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ಕಂಪನಿಯ ಸಿಇಒ ರೀತಿಯಲ್ಲಿ ಕಾರ್ಯನಿರ್ವಹಿಸದೆ, ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲಿ ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸಿ.ಯತಿರಾಜು ಆಗ್ರಹಿಸಿದರು.

.

ಪ್ರತಿಭಟನೆ

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸಿ. ಯತಿರಾಜು ಮಾತನಾಡಿ, ಭಾರತದಾದ್ಯಂತ ಇಂದು 80 ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ, ರೈತರನ್ನು ಋಣಮುಕ್ತಗೊಳಿಸುವ ಕಾನೂನು ರೂಪಿಸಬೇಕು ಹಾಗೂ ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತವಾದ ಬೆಲೆಯನ್ನು ಖಾತ್ರಿಪಡಿಸಲು ಸ್ವಾಮಿನಾಥನ್ ಯೋಜನೆಯನ್ನು ಜಾರಿಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ.

ಕೃಷಿ ಕ್ಷೇತ್ರದ ಬಂಡವಾಳವನ್ನು ಖಾಸಗಿ ಕ್ಷೇತ್ರಕ್ಕೆ ನೀಡುವಂತಹ ವ್ಯವಸ್ಥೆ ಮಾಡುವ ಮೂಲಕ ಸರ್ಕಾರ ಇಡೀ ಆಡಳಿತ ವ್ಯವಸ್ಥೆಯನ್ನು ಹೊರಗುತ್ತಿಗೆಗೆ ನೀಡುವಂತಹ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅವರು ಒಂದು ಕಂಪನಿಯ ಸಿಇಒ ರೀತಿಯಲ್ಲಿ ಕಾರ್ಯ ನಿರ್ವಹಿಸದೆ, ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details