ತುಮಕೂರು: ಇತ್ತೀಚೆಗಷ್ಟೇ ಕೆಲವು ಜೆಡಿಎಸ್ ಕಾರ್ಯಕರ್ತರು ಬೇರೆ ಪಕ್ಷಗಳಿಗೆ ಸೇರ್ಪಡೆಗೊಂಡಿದ್ದರು. ಅವರೀಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಚಾರದ ವೇಳೆ ವಾಪಸ್ ಪಕ್ಷಕ್ಕೆ ಬಂದಿದ್ದಾರೆಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಪಕ್ಷ ಬಿಟ್ಟವರೀಗ ಕುಮಾರಣ್ಣನಿಂದಾಗಿ ವಾಪಸ್ ಬರುತ್ತಿದ್ದಾರೆ.. ನಿಖಿಲ್ ಕುಮಾರಸ್ವಾಮಿ - jds election campaign in shira
ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದು ಸರ್ವೇಸಾಮಾನ್ಯ. ಜೆಡಿಎಸ್ ಪಕ್ಷ ಬಿಟ್ಟವರೀಗ ಹೆಚ್ ಡಿ ಕುಮಾರಸ್ವಾಮಿಯಿಂದಾಗಿ ಪಕ್ಷಕ್ಕೆ ವಾಪಸ್ ಬರುತ್ತಿದ್ದಾರೆಂದು..
ಶಿರಾ ವಿಧಾನಸಭಾ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ನಿನ್ನೆ ಪ್ರಚಾರ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದು ಸರ್ವೇಸಾಮಾನ್ಯ. ಪಕ್ಷ ಬಿಟ್ಟವರೀಗ ವಾಪಸ್ ಬರುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದಾರೆಂದು ತಿಳಿಸಿದರು.
ಇನ್ನು, ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಚಾರ ಭಾಷಣದ ವೇಳೆ ಭರವಸೆ ಕೊಟ್ಟಿದ್ದಾರೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಶಿರಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಈಗಾಗಲೇ ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದು, ಇದು ಜೆಡಿಎಸ್ ಪಕ್ಷದ ಎಚ್ಚರಿಕೆ ಎಂದು ತಿಳಿಸಿದರು.