ತುಮಕೂರು :ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡರಿಗೆ ಟಾಂಗ್ ನೀಡಿದರು. ತುಮಕೂರಿನಲ್ಲಿ ಬಿಜೆಪಿ ಪಕ್ಷ ಒಗ್ಗಟ್ಟಾಗಿದೆ. ಬಿಜೆಪಿ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ. ದೇಶ ಮೊದಲು ನಂತರ ಬೇರೆ ಎಲ್ಲಾ ಅನ್ನೋ ಸಂದೇಶ ಇದಾಗಿದೇ ಎಂದರು.
ತುಮಕೂರು ಲೋಕಸಭಾ ಕ್ಷೇತ್ರವನ್ನ ಹಣದ ಹೊಳೆಹರಿಸಿ ಗೆಲ್ಲಲು ಸಾಧ್ಯವಿಲ್ಲ: ವಿ ಸೋಮಣ್ಣ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲ್ಲಲಿದೆ. ಅಪವಿತ್ರ ಮೈತ್ರಿ ವ್ಯವಸ್ಥೆಗೆ ಜನ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯದಲ್ಲಿ 20 ರಿಂದ 22 ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.
ಚುನಾವಣೆ ಬಳಿಕ ಮೈತ್ರಿ ಕುಸಿಯಲಿದೆ. ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ, ಈ ಕುರಿತು ಇನ್ನು ಮೂರ್ನಾಲ್ಕು ದಿನಗಳಲ್ಲಿ ತಿಳಿಯಲಿದೆ ಎಂದರು.